ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು.
ಮಾರ್ಚ್ 30ರಂದು ಬೆಳಗ್ಗೆ 11 ಗಂಟೆಗೆ ಮಂಡಳಿಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ನಾಳೆಯೇ ಕಾಲೇಜಿನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ.
ಫೆಬ್ರವರಿ 12 ರಿಂದ 27 ರವರೆಗೆ ಪ್ರಥಮ ಪಿಯುಸಿ ಪರೀಕ್ಷೆ ನಡೆದಿತ್ತು. ನಾಳೆ ಫಲಿತಾಂಶ ಪ್ರಕಟವಾಗಲಿದ್ದು, ಅನುತ್ತೀರ್ಣರಾದವರಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಮಂಡಳಿ ವತಿಯಿಂದ ಈಗಾಗಲೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.