alex Certify ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದೆ.

ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022 ಅನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುವುದು. ಫಲಿತಾಂಶವು 11 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ.

12 ಆಗಸ್ಟ್ 2022 ರಿಂದ 25 ಆಗಸ್ಟ್ 2022 ರವರೆಗೆ ಪೂರಕ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಕರ್ನಾಟಕ ಪಿಯು ಮಂಡಳಿಯ ಅಧಿಕೃತ ಸೈಟ್‌ನಲ್ಲಿ ಪರಿಶೀಲಿಸಬಹುದು. 2ನೇ ಪಿಯುಸಿ ಫಲಿತಾಂಶದ ಲಿಂಕ್ ಅನ್ನು ಇಂದು ಬೆಳಗ್ಗೆ 11 ಗಂಟೆಗೆ ಸಕ್ರಿಯಗೊಳಿಸಲಾಗುತ್ತದೆ pue.kar.nic.in, pue.karnataka.gov.in, karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...