ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಯೋಜನೆ ರೂಪಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯದಲ್ಲಿ ತಲಾ 25 ಅಧಿವೇಷನ, ತಲಾ ಒಂದು ಪ್ರಶ್ನೆ ಪತ್ರಿಕೆ ಬಿಡಿಸುವಿಕೆ ಇರಲಿದೆ. ಇಂದಿನಿಂದ ಜ್ಞಾನ – ವಿಜ್ಞಾನ ತರಂಗ ಕಾರ್ಯಕ್ರಮ ವೀಕ್ಷಿಸಬಹುದಾಗಿದ್ದು, ಪ್ರತಿದಿನ ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ ನೇರ ಪ್ರಸಾರವಾಗಲಿದೆ. 100 ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಹೇಳಲಾಗಿದೆ.