alex Certify BIG NEWS: ಮೇ, ಜೂನ್ ನಲ್ಲಿ SSLC, PUC ಪರೀಕ್ಷೆ –ಸುರೇಶ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇ, ಜೂನ್ ನಲ್ಲಿ SSLC, PUC ಪರೀಕ್ಷೆ –ಸುರೇಶ್ ಕುಮಾರ್

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ.

ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...