ನವದೆಹಲಿ: ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ,. ಇದೇ ಜನವರಿ 17 ರಂದು ದೇಶದಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಬೇಕಿತ್ತು. ಜನವರಿ 16 ರಿಂದ ಕೊರೋನಾ ನೀಡಲಿರುವ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಮುಂದೂಡಲಾಗಿದೆ.
ಕೇಂದ್ರ ಸರ್ಕಾರಕ್ಕೆ ಪೋಲಿಯೋ ಲಸಿಕೆ ಕಾರ್ಯಕ್ರಮ ಮುಂದೂಡುವಂತೆ ರಾಜ್ಯ ಸರ್ಕಾರಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಕೇಂದ್ರ ಸರ್ಕಾರ ಮುಂದೂಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಸೂಚನೆ ನೀಡಿದ್ದು, ಎಲ್ಲಾ ರಾಜ್ಯಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.