alex Certify ಪುಲ್ವಾಮಾದಲ್ಲಿ ಎನ್ ಕೌಂಟರ್: ಓರ್ವ ಉಗ್ರ ಫಿನಿಶ್, ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುಲ್ವಾಮಾದಲ್ಲಿ ಎನ್ ಕೌಂಟರ್: ಓರ್ವ ಉಗ್ರ ಫಿನಿಶ್, ಇಬ್ಬರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಂಡಿಪೋರಾದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರನನ್ನು ಸೆರೆ ಹಿಡಿಯಲಾಗಿದೆ.

ಪುಲ್ವಾಮಾ ಜಿಲ್ಲೆಯ ಗುಂಡಿಪೋರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದು, ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಲಾಗಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಪೋರಾ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯದ ಇನ್ಸ್‌ ಪೆಕ್ಟರ್-ಜನರಲ್ ಪೊಲೀಸ್ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ, ಪೊಲೀಸ್ ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದು, ಬಳಿಕ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...