ಚಾಕಲೇಟ್ ಕೊಳ್ಳಲು ಹಣ ನೀಡುತ್ತೇನೆಂದು ಪುಸಲಾಯಿಸಿದ 12 ವರ್ಷದ ಬಾಲಕ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆಯೊಂದು ಪುಣೆಯಲ್ಲಿ ವರದಿಯಾಗಿದೆ. ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಾಲಕಿಯ ನೆರೆಮನೆಯಲ್ಲಿ ವಾಸವಿದ್ದ ಬಾಲಕ ಈ ರೀತಿಯ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪುಟ್ಟ ಬಾಲಕಿ ಆಟವಾಡಲು ಬಾಲಕನ ಮನೆಗೆ ತೆರಳಿದ್ದ ವೇಳೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ ನೆರಮನೆಯವರ ಪುತ್ರನು ಬಾಲಕಿಗೆ ಚಾಕಲೇಟ್ ಕೊಳ್ಳಲು ಹಣ ನೀಡುತ್ತೇನೆ ಎಂದು ನಂಬಿಸಿದ್ದಾನೆ. ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಬಾಲಕ ಈ ರೀತಿ ಮಾಡುತ್ತಿರೋದನ್ನು ಗಮನಿಸಿದ ಬಾಲಕಿಯ ತಾಯಿ ಆಕೆಯನ್ನು ಮನೆಗೆ ಕರೆದುಕೊಂಡು ಬಂದಿದ್ದಾಳೆ ಎಂದು ತಿಳಿದು ಬಂದಿದೆ.