alex Certify Shocking: ಚಾಕಲೇಟ್​ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಚಾಕಲೇಟ್​ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ

ಚಾಕಲೇಟ್​ ಕೊಳ್ಳಲು ಹಣ ನೀಡುತ್ತೇನೆಂದು ಪುಸಲಾಯಿಸಿದ 12 ವರ್ಷದ ಬಾಲಕ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆಯೊಂದು ಪುಣೆಯಲ್ಲಿ ವರದಿಯಾಗಿದೆ. ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಾಲಕಿಯ ನೆರೆಮನೆಯಲ್ಲಿ ವಾಸವಿದ್ದ ಬಾಲಕ ಈ ರೀತಿಯ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪುಟ್ಟ ಬಾಲಕಿ ಆಟವಾಡಲು ಬಾಲಕನ ಮನೆಗೆ ತೆರಳಿದ್ದ ವೇಳೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಪೊಲೀಸ್​ ಅಧಿಕಾರಿ ನೆರಮನೆಯವರ ಪುತ್ರನು ಬಾಲಕಿಗೆ ಚಾಕಲೇಟ್​ ಕೊಳ್ಳಲು ಹಣ ನೀಡುತ್ತೇನೆ ಎಂದು ನಂಬಿಸಿದ್ದಾನೆ. ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಬಾಲಕ ಈ ರೀತಿ ಮಾಡುತ್ತಿರೋದನ್ನು ಗಮನಿಸಿದ ಬಾಲಕಿಯ ತಾಯಿ ಆಕೆಯನ್ನು ಮನೆಗೆ ಕರೆದುಕೊಂಡು ಬಂದಿದ್ದಾಳೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...