
ಪುಣೆ: ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆ ಪ್ರಕರಣ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಡುವಿನ ಸಂಭವನೀಯ ಸಂಪರ್ಕದ ಕುರಿತು ಮಹಾರಾಷ್ಟ್ರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಶಂಕಿತರನ್ನು ಬಂಧಿಸಿದ ಅಧಿಕಾರಿಗಳು ಪುಣೆಯಲ್ಲಿ ಭಾನುವಾರ ತನಿಖೆ ನಡೆಸಿದ್ದಾರೆ. ನಗರದ ಪ್ರಮುಖ ಆಭರಣ ಉದ್ಯಮಿಯೊಬ್ಬರಿಗೆ ಬಿಷ್ಣೋಯ್ ಗ್ಯಾಂಗ್ನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.
ಮಾಹಿತಿಯ ಪ್ರಕಾರ, ಪುಣೆಯ ಪ್ರಸಿದ್ಧ ಆಭರಣ ಅಂಗಡಿ ಮಾಲೀಕನಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಹಾಕಿದ್ದು, 10 ಕೋಟಿ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಭರಣ ವ್ಯಾಪಾರಿಗೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಪ್ರಸ್ತುತ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರ ದೂರಿನ ಆಧಾರದ ಮೇಲೆ ದಾಖಲಾದ ಪ್ರಕರಣವನ್ನು ಸೈಬರ್ ಇಲಾಖೆಯು ನಿರ್ವಹಿಸುತ್ತಿದೆ. ಈ ಬೆದರಿಕೆಯು ಬಿಷ್ಣೋಯ್ ಗ್ಯಾಂಗ್ಗೆ ಸಂಪರ್ಕ ಹೊಂದಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಅಧಿಕಾರಿಗಳಿಂದ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ, ಆದರೆ ಉದ್ಯಮಿ ನಗರದೊಳಗೆ ಪ್ರಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.