ಪುಣೆ: ಮಹಾರಾಷ್ಟ್ರದ ಪುಣೆಯಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಸಹೋದ್ಯೋಗಿ ಪತ್ನಿಯ ಮೇಲೆ ಎರಡು ವಾರದ ಅವಧಿಯಲ್ಲಿ ಎರಡು ಪ್ರತ್ಯೇಕ ಸಂದರ್ಭದಲ್ಲಿ ಅತ್ಯಾಚಾರ ಎಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ಗಂಡ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಾನೆ. ಆತನ ಸಹೋದ್ಯೋಗಿಯಾಗಿದ್ದ ಆರೋಪಿ ಅಕ್ಟೋಬರ್ 26 ಮತ್ತು ನವೆಂಬರ್ 2 ರಂದು ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಮಹಿಳೆಯ ಪತಿ ಮತ್ತು ಆರೋಪಿತ ಒಂದೇ ಪಾಳಿಯಲ್ಲಿ ಸೆಕ್ಯುರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಸಹೋದ್ಯೋಗಿ ನಿದ್ದೆಗೆ ಜಾರಿದ ನಂತರ ಆರೋಪಿ ಸಹೋದ್ಯೋಗಿ ಫೋನ್ ನಿಂದಲೇ ಆತನ ಪತ್ನಿಗೆ ಕರೆ ಮಾಡಿ ಮನೆಯ ಗೇಟ್ ತೆರೆಯುವಂತೆ ತಿಳಿಸಿದ್ದಾನೆ. ಬಲವಂತವಾಗಿ ಮನೆ ಪ್ರವೇಶಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ನವೆಂಬರ್ 2 ರಂದು ಮತ್ತೊಮ್ಮೆ ಅತ್ಯಾಚಾರ ಎಸಗಿದ್ದು ಮಹಿಳೆ ಗಂಡನಿಗೆ ಮಾಹಿತಿ ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.