
ಮುಂಬೈ: ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರದ(MHADA) ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪುಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಎಂ.ಹೆಚ್.ಎ.ಡಿ.ಎ. ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಾಗಿ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತಾಭ್ ಗುಪ್ತಾ ತಿಳಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.