ಪುಣೆ :ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಾಪರಾಧಿಯನ್ನು ವೀಕ್ಷಣಾ ಗೃಹದಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ.
ಮದ್ಯದ ಅಮಲಿನಲ್ಲಿ 17 ವರ್ಷದ ಬಾಲಕನೊಬ್ಬ ಚಲಾಯಿಸುತ್ತಿದ್ದ ಪೋರ್ಷೆ ಕಾರು ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳಿಗೆ ( ಬೈಕ್ ಸವಾರರಿಗೆ) ಡಿಕ್ಕಿ ಹೊಡೆದ ಘಟನೆ ಪುಣೆಯ ಕಲ್ಯಾಣಿ ನಗರದಲ್ಲಿ ನಡೆದಿತ್ತು. ಘಟನೆಯಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು.