
ಕರ್ನಾಟಕದ ಬಳಿಕ ಇದೀಗ ಪುಣೆಯಲ್ಲಿ ಆರ್.ಟಿ.ಒ. ಅಧಿಕಾರಿಗಳು ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮ ಕೈಗೊಂಡು, ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಒಂದೇ ದಿನ 65 ರಾಪಿಡೊ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಕರ್ನಾಟಕದಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈಗ ಪುಣೆಯಲ್ಲೂ ಇದು ಮುಂದುವರೆದಿದೆ.
ರಾಪಿಡೋ ಬೈಕ್ ಟ್ಯಾಕ್ಸಿ ಬಂದ್ಮೇಲೆ ರೋಸಿ ಹೋದ ಆಟೋರಿಕ್ಷಾ ಅಸೋಸಿಯೇಷನ್ ದೂರು ದಾಖಲಿಸಿದ್ದರು. ಹೀಗಾಗಿ ನಗರದ ವಿವಿಧ ಭಾಗಗಳಲ್ಲಿ RTO ಅಧಿಕಾರಿಗಳು ಕಾನೂನು ಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ರಾಪಿಡೊ ಬೈಕ್ ಗಳನ್ನ ಸೀಜ್ ಮಾಡಿದ್ದಾರೆ.
ಭವಿಷ್ಯದಲ್ಲಿಯೂ ಈ ಅಭಿಯಾನ ಮುಂದುವರಿಯಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಅಜಿತ್ ಶಿಂಧೆ ಆಟೋರಿಕ್ಷಾ ಸಂಘಕ್ಕೆ ಭರವಸೆ ನೀಡಿದ್ದಾರೆ. ಬೈಕ್ ಟ್ಯಾಕ್ಸಿಯನ್ನ ಅಸುರಕ್ಷಿತ ಮತ್ತು ಅಕ್ರಮ ದ್ವಿಚಕ್ರ ಅಗ್ರಿಗೇಟರ್ ಎಂದಿರುವ ಅವರು, ರಾಪಿಡೊದಂತಹ ಬೈಕ್ ಟ್ಯಾಕ್ಸಿ ಬಳಸದಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಲೋಕಸಭೆಯಲ್ಲಿ ಹಿಜಾಬ್ ವಿಚಾರಕ್ಕೆ ಮಾತಿನ ಚಕಮಕಿ
ಬೈಕ್ ಟ್ಯಾಕ್ಸಿ ಕಾನ್ಸೆಪ್ಟ್ ಬಂದಾಗಿನಿಂದ ಆಟೋದವರ ಮತ್ತು ಬೈಕ್ ಟ್ಯಾಕ್ಸಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಬಳಕೆಯನ್ನು ವಿರೋಧಿಸಿ ಭಾರೀ ಪ್ರತಿಭಟನೆ ಸಹ ನಡೆಸಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೇವಲ ನಾಲ್ಕು ಗಂಟೆಗಳಲ್ಲಿ 120 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ರಾಪಿಡೋ ಸಂಸ್ಥೆಯ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ, ಆಟೋರಿಕ್ಷಾ ಚಾಲಕರು, ಬೈಕ್ ಟ್ಯಾಕ್ಸಿಗಳ ಪೈಪೋಟಿಯನ್ನು ವಿರೋಧಿಸಿ ಪ್ರತಿಭಟಿಸುತ್ತಿರುವುದರಿಂದ ಯಾವುದೇ ಕಾರಣವಿಲ್ಲದೇ ಬೈಕ್ ಟ್ಯಾಕ್ಸಿಗಳ ಸವಾರರಿಗೆ ಕಿರುಕುಳ ನೀಡಲಾಗುತ್ತಿದೆ. ರಾಪಿಡೋ ಕಾನೂನು-ಪಾಲಿಸುವ ಕಂಪನಿಯಾಗಿದೆ. ಕಾನೂನಿನ ಮಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು RTO ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.