ಪುಣೆ: ಮಹಾರಾಷ್ಟ್ರದ ಪುಣೆಯ ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಭದ್ರತಾ ಸಿಬ್ಬಂದಿ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 47 ವರ್ಷದ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಡಿಸೆಂಬರ್ 21 ರಂದು ರಾತ್ರಿ ಘಟನೆ ನಡೆದಿದ್ದು, ಯುವತಿಯಿಂದ ಹೇಳಿಕೆ ಪಡೆದು ಎಫ್ಐಆರ್ ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.
ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿರುವ ಆರೋಪಿ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಮಹಿಳೆ ಇದ್ದ ಕೊಠಡಿಗೆ ಪ್ರವೇಶಿಸಿದ್ದಾನೆ. ಚಿಕಿತ್ಸೆಯ ಬಗ್ಗೆ ಕೇಳುವ ನೆಪದಲ್ಲಿ ಬೇರೆ ವಾರ್ಡ್ ಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ನಂತರ ಸಂತ್ರಸ್ತೆ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರಿಗೆ ವಿಷಯ ತಿಳಿಸಲಾಗಿದೆ. ಸಹಾಯಕ ಇನ್ಸ್ ಪೆಕ್ಟರ್ ಗಣೇಶ್ ಲೊಂಡೆ ಈ ಕುರಿತು ಮಾಹಿತಿ ನೀಡಿದ್ದು, ಆರೋಪಿ ಬಂಧಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.