
ಬೆಂಗಳೂರು: ಕನ್ನಡಿಗರ ಕಣ್ಮಣಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಎರಡು ವರ್ಷ. ಪುನೀತ್ ರಾಜ್ ಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಸಮಾಧಿಗೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.
ಕಂಠೀರವ ಸ್ಟೂಡಿಯೋ ಬಳಿ ಇರುವ ಪುನೀತ್ ರಾಜ್ ಕುಮಾರ್ ಸಮಾಧಿಗೆ ಪುನೀತ್ ಪತ್ನಿ ಅಶ್ವಿನಿ, ಮಕ್ಕಳು ಪೂಜೆ ಸಲ್ಲಿಸಿ ನಮನ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್ ಕುಮಾರ್, ಪುತ್ರ ಯುವ ರಾಜ್ ಕುಮಾರ್, ಶಿವರಾಜ್ ಕುಮಾರ್, ಅಕ್ಕ ಪೂರ್ಣಿಮಾ, ಧನ್ಯಾ ರಾಮಕುಮಾರ್ ಸೇರಿದಂತೆ ಕುಟುಂಬದ ಸದಸ್ಯರು ನಮನ ಸಲ್ಲಿಸಿದರು.
ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಸಮಾಧಿ ಬಳಿ ಅಪ್ಪು ಅಭಿಮಾನಿಗಳು ಹರಿದು ಬರುತ್ತಿದ್ದು, ಸರದಿ ಸಾಲಿನಲ್ಲಿ ನಿಂತು ಸಮಾದಿ ದರ್ಶನ ಪಡೆದು ತೆರಳುತ್ತಿದ್ದಾರೆ.