ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿರುವ ಸಿಸಿಬಿ ಪೊಲೀಸರು ಆಗಸ್ಟ್ 11ರ ಶುಕ್ರವಾರದಂದು ಬಂಧಿಸಿದ್ದರು.
ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧಿ ಕಾರ್ಯಗಳ, ಹಾಗೂ ಹಿಂದಿನ ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಅಲ್ಲದೆ ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿತ್ತು.
ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆ ಅಡಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿರುವುದು ಅಕ್ರಮ ಎಂದು ಈಗ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದ ಮುಂದೆ ಇದು ಬುಧವಾರದಂದು ವಿಚಾರಣೆಗೆ ಬಂದಿದೆ.