
ಬೆಂಗಳೂರು: ರಾಷ್ಟ್ರರಕ್ಷಣಾ ಪಡೆ ಮುಖಂಡ, ಹಿಂದೂ ಪರ ಸಂಘಟನೆ ನಾಯಕ ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆಗೆ ಯತ್ನ ಕೇಸ್ ದಾಖಲಾಗಿದೆ.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಐಪಿಸಿ ಸೆಕ್ಷನ್ 309ರ ಅಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಪುನೀತ್ ಕೆರೆಹಳ್ಳಿ ರಾಜ್ಯ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಮನವೊಲಿಕೆ ಮಾಡಿದರೂ ಸತ್ಯಾಗ್ರಹದಿಂದ ಹಿಂದೆಸರುಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆ ಯತ್ನ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.