alex Certify ಪವರ್ ಸ್ಟಾರ್ ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿ ಅರೆಸ್ಟ್

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಕಿಡಿಗೇಡಿಯನ್ನು ಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಈ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಕಿಡಿಗೇಡಿ, ಪುನೀತ್ ರಾಜಕುಮಾರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಸಿ ಪೋಸ್ಟ್ ಮಾಡಿದ್ದಾನೆ.

ಮದ್ಯ ಕುಡಿಯುವ ಉದ್ದೇಶದಿಂದ ಪುನೀತ್ ರಾಜಕುಮಾರ್ ಅವರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...