
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟಿದ ದಿನವಿಂದು. ಅವರು ನಮ್ಮೊಂದಿಗೆ ಇದ್ದಿದ್ದರೆ ಇಂದು 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪತ್ನಿ ಅಶ್ಚಿನಿ, ಮಕ್ಕಳೊಂದಿಗೆ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಇರುವ ದಿ.ಪುನೀತ್ ರಾಜ್ ಕುಮಾರ್ ಸಮಾಧಿ ಬಳಿ ಆಗಮಿಸಿದ ಅಶ್ವಿನಿ ಪುನೀತ್ ಹಾಗೂ ಮಕ್ಕಳು ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಈ ವೇಳೆ ನಟ ರಾಘವೇಂದ್ರ ರಾಜಕುಮಾರ್ ಹಾಗೂ ಕುಟುಂಬದವರು ಉಪಸ್ಥಿತರಿದ್ದರು.