ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಲಕ್ಷಾಂತರ ಅಭಿಮಾನಿಗಳು ದರ್ಶನಕ್ಕೆ ಆಗಮಿಸಿದ್ದಾರೆ. ಇಂದು ರಾತ್ರಿಯಿಂದ ನಾಳೆ ಇಡೀ ದಿನ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧ ಕಡೆಗಳಿಂದ ಮೂಲೆಮೂಲೆಗಳಿಂದ ಬೆಂಗಳೂರಿನತ್ತ ಅಭಿಮಾನಿಗಳ ದಂಡು ಹರಿದು ಬರುತ್ತಿದೆ.
ಭಾರಿ ಸಂಖ್ಯೆಯ ಅಭಿಮಾನಿಗಳು ದರ್ಶನಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂ ಬಳಿ ಲಕ್ಷಾಂತರ ಜನರಿಗೆ ರಾತ್ರಿನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಒಳಗೆ ನುಗ್ಗಲು ಅಭಿಮಾನಿಗಳು ಪ್ರಯತ್ನ ನಡೆಸಿದ್ದರಿಂದ ಸ್ಟೇಡಿಯಂ ಬಳಿ ನೂಕುನುಗ್ಗಲು ಉಂಟಾಗಿದೆ.