ಬೆಂಗಳೂರು : ಬಿಬಿಎಂಪಿ ನೌಕರರ ಕನ್ನಡ ಸಂಘದ ವತಿಯಿಂದ ನ.18 ರಂದು ಇಂದು ‘ಕರ್ನಾಟಕ ರತ್ನ ಡಾ ಪುನೀತ್ ರಾಜ್ ಕುಮಾರ್ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ.
ಬಿಬಿಎಂಪಿಯ 20 ನೌಕರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಇಂದು ಸಂಜೆ 5 ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯ ಆಯುಕ್ತೆ ತುಷಾರ್ ಗಿರಿನಾಥ್, ನಟ ರಮೇಶ್ ಅರವಿಂದ್, ನಟಿ ಭವ್ಯಾ , ಭಾವನಾ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ . ಕರ್ನಾಟಕ ರತ್ನ ಡಾ ಪುನೀತ್ ರಾಜ್ ಕುಮಾರ್ ಕಂಚಿನ ಪ್ರತಿಮೆಯನ್ನು ಬಿಬಿಎಂಪಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ಅವರ ಹೆಸರಿನಲ್ಲಿ ಕಳೆದ ಒಂದು ವರ್ಷದಿಂದ ಪ್ರಶಸ್ತಿ ನೀಡಲಾಗುತ್ತಿದೆ.