ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಮಾಧಿ ವೀಕ್ಷಣೆಗೆ ಕಾತರಿಸುತ್ತಿರುವ ಅಭಿಮಾನಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.
ಡಾ. ರಾಜಕುಮಾರ್ ಕುಟುಂಬದವರು ಹಾಲು ತುಪ್ಪ ವಿಧಿ ವಿಧಾನ ಪೂರ್ಣಗೊಳಿಸಿದ ಬಳಿಕ ಪುನೀತ್ ರಾಜಕುಮಾರ್ ಸಮಾಧಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕುರಿತಾಗಿ ಮಾಹಿತಿ ನೀಡಿದ್ದು, ಅಂತ್ಯಸಂಸ್ಕಾರ ಪೂರ್ಣಗೊಂಡು ಎರಡು ದಿನಗಳಷ್ಟೇ ಆಗಿದೆ. ಈಗಲೇ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಿದರೆ ಮುಗಿಬೀಳುತ್ತಾರೆ. ಸಮಾಧಿಗೆ ಹಾಕಿದ ಮಣ್ಣು ತೆಗೆದುಕೊಂಡು ಹೋಗುತ್ತಾರೆ. ಇದರಿಂದ ಕುಟುಂಬದವರ ವಿಧಿ ವಿಧಾನಕ್ಕೆ ತೊಂದರೆಯಾಗುತ್ತದೆ. ರಾಜ್ ಕುಮಾರ್ ಕುಟುಂಬದವರು ಎಲ್ಲಾ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಅಗತ್ಯ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.
ಅಪ್ಪು ಸಮಾಧಿ ವೀಕ್ಷಣೆಗೆ ಅಭಿಮಾನಿಗಳು ಬಿಗಿಪಟ್ಟು ಹಿಡಿದಿದ್ದಾರೆ. ಅಂತಿಮದರ್ಶನ ಸಿಗದವರು ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ. ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದು, ಒಂದೆರಡು ದಿನಗಳಲ್ಲಿ ದರ್ಶನಕ್ಕೆ ಅವಕಾಶ ನೀಡಬಹುದು ಎಂದು ಹೇಳಲಾಗಿದೆ.