ಬೆಂಗಳೂರು: ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಶ್ವಿನಿ ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವನಾಥ್ ನಿಧನರಾಗಿದ್ದಾರೆ. ಪುನೀತ್ ರಾಜಕುಮಾರ್ ಅಗಲಿಕೆ ಆಘಾತದಿಂದ ಹೊರ ಬರುವ ಮೊದಲೇ ತಂದೆಯನ್ನು ಅಶ್ವಿನಿ ಕಳೆದುಕೊಂಡಿದ್ದಾರೆ. ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಚಿಕ್ಕಮಗಳೂರು ಮೂಲದ ರೇವನಾಥ್ ಅವರು ಅಳಿಯ ಪುನೀತ್ ಅಗಲಿಕೆ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.