alex Certify ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪೋಸ್ಟರ್ ಹರಿದವನಿಗೆ ಗೂಸಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪೋಸ್ಟರ್ ಹರಿದವನಿಗೆ ಗೂಸಾ

ಶಿವಮೊಗ್ಗ: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದುಹಾಕಿದ ವ್ಯಕ್ತಿಗೆ ಸ್ಥಳೀಯರು ಗೂಸಾ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಪುನೀತ್ ರಾಜಕುಮಾರ್ ಸ್ಮರಣಾರ್ಥ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಎದುರು ಪುನೀತ್ ರಾಜಕುಮಾರ್ ಅವರ ಭಾವಚಿತ್ರವಿರುವ ಬೃಹತ್ ಫ್ಲೆಕ್ಸ್ ಅಳವಡಿಸಲಾಗಿದೆ. ಮದ್ಯಸೇವನೆ ಮಾಡಿದ್ದ ಆನಂದ್ ಎಂಬಾತ ಪುನೀತ್ ರಾಜಕುಮಾರ್ ಫ್ಲೆಕ್ಸ್ ಹರಿದು ತೆಗೆದುಕೊಂಡು ಹೊರಟಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆತನಿಗೆ ಧರ್ಮದೇಟು ನೀಡಿ ಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...