
ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಇರುವ ಅಭಿಮಾನಿಗಳಿಗೆ ಪುನೀತ್ ಅವರ ಹಠಾತ್ ನಿಧನ ಬರಸಿಡಿಲು ಬಡಿದಂತಾಗಿದೆ. ಇದಕ್ಕೆ ಬಾಲಿವುಡ್ ಕೂಡ ಹೊರತಾಗಿಲ್ಲ. ಬಾಲಿವುಡ್ ಚಿತ್ರರಂಗದ ಗಣ್ಯರು ಸಹ ಅಪ್ಪು ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ.
ನಟರಾದ ಅನಿಲ್ ಕಪೂರ್, ಅಭಿಷೇಕ್ ಬಚ್ಚನ್, ಸಂಜಯ್ ದತ್, ಅಜಯ್ ದೇವಗನ್, ರಿತೇಶ್ ದೇಶಮುಖ್, ನಟಿಯರಾದ ತಾಪ್ಸಿ ಪನ್ನು, ರಿಚಾ ಚಡ್ಡಾ, ಜೆನಿಲಿಯಾ ಡಿಸೋಜಾ, ಮುಂತಾದ ಖ್ಯಾತನಾಮರು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಬಾಲಿವುಡ್ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ ಚಿತ್ರರಂಗದ ಹಲವು ಗಣ್ಯರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.