alex Certify ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ; ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ; ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಎಂಬ ಅಪ್ಪು ಅಭಿಮಾನಿಗಳ ಆಶಯವನ್ನು ಇದೀಗ ಬೆಂಗಳೂರು ವಿಶ್ವವಿದ್ಯಾಲಯ ಈಡೇರಿಸಿದೆ.

ಪುನೀತ್ ರಾಜ್ ಕುಮಾರ್ ಜೀವನ-ಸಾಧನೆಯನ್ನು ಪಠ್ಯದಲ್ಲಿ ಅಳವಡಿಸಬೇಕು ಎಂದು ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಇದೀಗ ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ ರಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ.

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ್’ ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಅಳವಡಿಸಲಾಗಿದೆ.

ಇತ್ತೀಚೆಗೆ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...