
ಬೆಂಗಳೂರು: ಬೆಂಗಳೂರಿನ ರಿಂಗ್ ರಸ್ತೆಗೆ ಇಂದು ‘ಪುನೀತ್ ರಾಜಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಗುವುದು.
ನಟ ಪುನೀತ್ ರಾಜ್ ಕುಮಾರ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡಲಿದ್ದು, ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಭಾಗಿಯಾಗಲಿದ್ದಾರೆ ಎಂದು ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.