ಬೆಂಗಳೂರು: ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯದ ಖಾಸಗಿ ಶಾಲೆಗಳಿಗೆ ರುಪ್ಸಾ ಕರ್ನಾಟಕದಿಂದ ರಜೆ ಘೋಷಣೆ ಮಾಡಲಾಗಿದೆ.
ಸರ್ಕಾರಿ ಶಾಲೆಗಳಿಗೆ ರಜೆ ನೀಡುವ ಕುರಿತಾಗಿ ಚರ್ಚೆ ನಡೆದಿದ್ದು, ಶೀಘ್ರವೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.