alex Certify ಅಪ್ಪು ‘ಗಂಧದಗುಡಿ’ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪು ‘ಗಂಧದಗುಡಿ’ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕರ್ನಾಟಕದ ವನ್ಯಜೀವಿ ಸಂಪತ್ತು ಹಾಗೂ ಸಂಸ್ಕೃತಿ ಬಗ್ಗೆ ನಿರ್ಮಿಸಿದ ‘ಗಂಧದಗುಡಿ’ ಸಾಕ್ಷ್ಯ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಸಿಎಂ ಭೇಟಿಯಾಗಿ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಪುನೀತ್ ರಾಜಕುಮಾರ್ ಅವರ ಪಿ.ಆರ್.ಕೆ. ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಸಾಕ್ಷ್ಯಚಿತ್ರಕ್ಕೆ ‘ಗಂಧದಗುಡಿ’ ಎಂದು ಹೆಸರಿಡಲಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಡಿಸೆಂಬರ್ 6 ರಂದು ಅಪ್ಪು ಅವರ ಅಮೋಘವಾದ ಕನಸಿನ ಪಯಣ ಹಿಂದೆಂದೂ ಕಾಣದ ರೋಮಾಂಚಕ ಅನುಭವ ಸಾಕ್ಷ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...