alex Certify ಕಾನೂನಿನಲ್ಲಿ ನಿಗದಿಪಡಿಸಿದ ಅವಧಿಗಿಂತ ಹೆಚ್ಚು ಪ್ರಮಾಣದ ಶಿಕ್ಷೆ ವಿಧಿಸಲಾಗದು: ಹೈಕೋರ್ಟ್ ಮಹತ್ವದ ಅಭಿಪ್ರಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾನೂನಿನಲ್ಲಿ ನಿಗದಿಪಡಿಸಿದ ಅವಧಿಗಿಂತ ಹೆಚ್ಚು ಪ್ರಮಾಣದ ಶಿಕ್ಷೆ ವಿಧಿಸಲಾಗದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಪರಾಧ ಪ್ರಕರಣಗಳು ದೃಢಪಟ್ಟ ಸಂದರ್ಭದಲ್ಲಿ ಕಾನೂನಿನಲ್ಲಿ ನಿಗದಿಪಡಿಸಿದ ಅವಧಿಗಿಂತ ಹೆಚ್ಚಿನ ಪ್ರಮಾಣದ ಶಿಕ್ಷೆ ವಿಧಿಸಲಾಗದು ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ವ್ಯಕ್ತಿಯೊಬ್ಬನಿಗೆ ವಿಧಿಸಲಾಗಿದ್ದ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಅಪರಾಧಿಯೊಬ್ಬನ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕ ಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧದ ಮೇಲೆ 20 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಅರ್ಜಿದಾರನಿಗೆ ಶಿಕ್ಷೆಯ ಪ್ರಮಾಣವನ್ನು 10 ವರ್ಷಕ್ಕೆ ಕಡಿತಗೊಳಿಸಿ ಆದೇಶಿಸಲಾಗಿದೆ.

2015ರಲ್ಲಿ ನಡೆದಿದ್ದ ಈ ಅತ್ಯಾಚಾರ ಪ್ರಕರಣದ ಸಂದರ್ಭದಲ್ಲಿ ಐಪಿಸಿ ಸೆಕ್ಷನ್ 376 (2) ಚಾಲ್ತಿಯಲ್ಲಿದ್ದು ಇದರ ಪ್ರಕಾರ ಸಂಬಂಧಿ, ಪೋಷಕರು ಅಥವಾ ಶಿಕ್ಷಕರು ಅತ್ಯಾಚಾರವೆಸಗಿದರೆ ಗರಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲು ಅವಕಾಶವಿತ್ತು. 2018ರ ಏಪ್ರಿಲ್ ನಿಂದ ಜಾರಿಗೆ ಬಂದಿರುವ ಐಪಿಸಿ ಸೆಕ್ಷನ್ 376 (3) ರ ಪ್ರಕಾರ ಈ ಅಪರಾಧಕ್ಕೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

2015ರಲ್ಲಿ ನಡೆದ ಅತ್ಯಾಚಾರ ಪ್ರಕರಣ ಕುರಿತು ಮಹಿಳೆ 2018ರ ಅಕ್ಟೋಬರ್ 13ರಂದು ಪೊಲೀಸರಿಗೆ ದೂರು ನೀಡಿ ತನ್ನ ಎರಡನೇ ಪತಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಕಾನೂನಿನಲ್ಲಿ ಇರುವುದಕ್ಕಿಂತ ಹೆಚ್ಚಿನ ಪ್ರಮಾಣದ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ದೂರನ್ನು ತಡವಾಗಿ ಸಲ್ಲಿಸಲಾಗಿದೆ. ಹೀಗಾಗಿ ಪ್ರಕರಣ ರದ್ದುಪಡಿಸಿ ಎಂದು ಮನವಿ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...