ಚಾಮರಾಜನಗರ: ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಶೂನ್ಯ ಎಂಬ ಮಾಹಿತಿ ಕೇಳಿ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಿಎಂ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಎಸ್.ಪಿ. ಪದ್ಮಿನಿ ಸಾಹು ಅವರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಹೊಸಬರಿರಬಹುದು ಸುಮ್ಮನೆ ವಾದ ಮಾಡಬೇಡಿ ಎಂದು ಹೇಳಿದ್ದಾರೆ.
ಪ್ರತಿ ವರ್ಷ 20 ರಿಂದ 25 ಅಟ್ರಾಸಿಟಿ ಕೇಸ್ ದಾಖಲಾಗುತ್ತವೆ. ಕಳೆದ ಮೂರು ವರ್ಷದಿಂದ ಒಂದೇ ಒಂದು ಕೇಸ್ ನಲ್ಲಿ ಶಿಕ್ಷೆಯಾಗಿಲ್ಲ. ಸಿಎಂ ಮಾತನಾಡುವಾಗ ಎಸ್.ಪಿ., 5 ಕೇಸ್ ವಜಾ ಆಗಿದೆ ಎಂದು ಹೇಳಿದ್ದಾರೆ. ಅವರ ವಿವರಣೆಗೆ ಸಿಎಂ ಸಿಡಿಮಿಡಿಗೊಂಡಿದ್ದಾರೆ. ಅಲ್ಲಮ್ಮ, ಆರೋಪಿಗಳಿಗೆ ಶಿಕ್ಷೆ ಆಗಲ್ಲ ಎಂದರೆ ಭಯ ಹೇಗೆ ಬರುತ್ತದೆ? ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಅವರಿಗೆ ಅಗತ್ಯಕ್ರಮ ವಹಿಸಲು ಸಿಎಂ ಸೂಚನೆ ನೀಡಿದ್ದಾರೆ.