ಬೆಂಗಳೂರು: ಕುರಿ ಮಾಂಸದ ಜೊತೆ ನಾಯಿ ಮಾಂಸ ಸಾಗಾಟ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದು ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿದ್ದು, ಇದೀಗ ಮೂರನೇ ಎಫ್ ಐ ಆರ್ ದಾಖಲಾಗಿದೆ.
ಅಕ್ರಮವಾಗಿ ಮಾಂಸ ಮಾರಾಟದ ಬಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಿ ಗಲಾಟೆ ಮಾಡುತ್ತಿದ್ದ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಬಂಧಿಸಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಮೂರು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.
ಗುಂಪುಗೂಡಿ ಗಲಾಟೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಮೂರನೇ ಎಫ್ ಐಆರ್ ದಾಖಲಿಸಿ ಕಾಟನ್ ಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮಾಂಸ ಮಾರಾಟ ಸಾಗಾಟ ಆರೋಪ ಪ್ರಕರಣ ಸಂಬಂಧ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಸೇರಿ 12 ಜನರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಇಂದು ಹಾಜರಾಗದಿದ್ದರೆ ನೋಟಿಸ್ ನೀಡಲಾಗುವುದು. ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.