
ನವದೆಹಲಿ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಬುಧವಾರ ತಡರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಪ್ರಸ್ತುತ ರಾಷ್ಟ್ರ ರಾಜಧಾನಿಯ ಸರಿತಾ ವಿಹಾರ್ ಪ್ರದೇಶದ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಪರೀಕ್ಷೆ ಬಳಿಕ ಅವರಿಗೆ ಹೊಟ್ಟೆಯ ಸೋಂಕು ಇರುವುದು ಪತ್ತೆಯಾಗಿದೆ. ವೈದ್ಯರು ಮಾನ್ ಅವರಿಗೆ ಚಿಕಿತ್ಸೆ ನೀಡಿದ್ದು, ಚಿಕಿತ್ಸೆ ಬಳಿಕ ಚೇತರಿಕೊಳ್ಳುತ್ತಿದ್ದಾರೆ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.