ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಭಗವಾಂತ್ ಮಾನ್ ನಿನ್ನೆ ತಡರಾತ್ರಿ ಮೊಹಾಲಿಯಲ್ಲಿನ ಫೊರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಭಗವಂತ್ ಮಾನ್ ಲೋ ಬಿಪಿಯಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಆದರೀಗ ಮತ್ತೆ ಅನಾರೋಗ್ಯಕ್ಕೀಡಾಗಿರುವ ಭಗವಾಂತ್ ಮಾನ್ ಆಸ್ಪತೆಗೆ ದಾಖಲಾಗಿದ್ದಾರೆ.