ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಪ್ರಧಾನಿ ಮೋದಿಯವರ ಕ್ಷಮೆ ಕೋರಿದ್ದಾರೆ.
ಪಂಜಾಬ್ ನಲ್ಲಿ ಇತ್ತೀಚೆಗೆ ಮೋದಿ ಭೇಟಿಯ ಸಂದರ್ಭದಲ್ಲಿ ಭದ್ರತಾ ಲೋಪ ಉಂಟಾಗಿರುವ ಕುರಿತಂತೆ ಪಂಜಾಬ್ ಮುಖ್ಯಮಂತ್ರಿ ಕ್ಷಮೆಯಾಚಿಸಿದ್ದಾರೆ.
ಕಳೆದವಾರ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪದ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದಲ್ಲಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ತನಿಖಾ ತಂಡದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು, ಪಂಜಾಬ್ ಪೊಲೀಸರು ತನಿಖೆಯ ಭಾಗವಾಗಿರಲಿದ್ದಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೇ, ಭದ್ರತಾ ಲೋಪದ ಬಗ್ಗೆ ಏಕಮುಖವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಡುವುದಿಲ್ಲ. ಈ ಹಿನ್ನೆಲೆಯಲ್ಲಿ ಸ್ವತಂತ್ರ ತನಿಖೆ ನಡೆಸುತ್ತಿರುವುದಾಗಿ ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿದೆ.
ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಭದ್ರತೆಯಲ್ಲಿ ಲೋಪ ಕಂಡು ಬಂದಿದ್ದ ವಿಚಾರವಾಗಿ ಪಂಜಾಬ್ ಮುಖ್ಯಮಂತ್ರಿ ಕ್ಷಮೆ ಕೋರಿದ್ದಾರೆ.
ಗುರುವಾರ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಚನ್ನಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರಿಗೆ ದೀರ್ಘಾಯುಷ್ಯವನ್ನು ಕೋರಲು ಪದ್ಯವನ್ನು ಪಠಿಸಿದ್ದಾರೆ.
ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಮೋದಿಯವರ ವಿಡಿಯೋ ಸಂವಾದದ ಸಂದರ್ಭವನ್ನು ಚನ್ನಿ ಅವರಿಗೆ ಸಂದೇಶವನ್ನು ರವಾನಿಸಲು ಬಳಸಿಕೊಂಡಿದ್ದಾರೆ.
ಪಂಜಾಬ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಆದ ಘಟನೆಗೆ ಪಶ್ಚಾತ್ತಾಪ ಪಡುತ್ತೇನೆ ಎಂದು ಚನ್ನಿ ಮೋದಿಗೆ ತಿಳಿಸಿದ್ದಾರೆ.