alex Certify ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೊಟ್ಟೆ ಕಳವು ಮಾಡಿದ್ದ ಪೊಲೀಸ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೊಟ್ಟೆ ಕಳವು ಮಾಡಿದ್ದ ಪೊಲೀಸ್ ಸಸ್ಪೆಂಡ್

ಚಂಡೀಗಢ: ಮೊಟ್ಟೆಗಳನ್ನು ಕಳವು ಮಾಡಿದ್ದ ಚಂಡಿಗಢ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಚಂಢೀಗಢದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ರಸ್ತೆ ಬದಿ ಇದ್ದ ಗಾಡಿಯಿಂದ ಮೊಟ್ಟೆಗಳನ್ನು ಕದಿಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದಾದ ನಂತರ ಪಂಜಾಬ್ ಹೆಡ್ ಕಾನ್ಸ್ ಟೇಬಲ್ ಪ್ರೀತ್ ಪಾಲ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ. ಫತೇಘಡ್ ಸಾಹೇಬ್ ಪೊಲೀಸ್ ಠಾಣೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು.

ಆತ ಮೊಟ್ಟೆ ಕಳವು ಮಾಡಿದ ವಿಡಿಯೋ ವೈರಲ್ ಆಗಿದ್ದು, ಇಲಾಖಾ ವಿಚಾರಣೆಯ ನಂತರ ಕ್ರಮಕೈಗೊಂಡು ಸಸ್ಪೆಂಡ್ ಮಾಡಲಾಗಿದೆ ಎಂದು ಪಂಜಾಬ್ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...