ಪಂಜಾಬ್ನ ಲೂಧಿಯಾನ ನ್ಯಾಯಾಲಯ ಬಾಲಿವುಡ್ ನಟ ಸೋನು ಸೂದ್ ಅವರನ್ನು 10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲು ವಾರಂಟ್ ಹೊರಡಿಸಿದೆ.
ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಎಂಬವರು ಮೋಹಿತ್ ಶುಕ್ಲಾ ಎಂಬಾತನ ವಿರುದ್ಧ ದೂರು ದಾಖಲಿಸಿದ್ದರು. ಇದರಲ್ಲಿ ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ ತನ್ನನ್ನು ವಂಚಿಸಲಾಗಿದೆ ಎಂದು ಆರೋಪಿಸಿದ್ದರು.
ಈ ಪ್ರಕರಣದಲ್ಲಿ ಸಾಕ್ಷಿ ಹೇಳಲು ಸೋನು ಸೂದ್ ಅವರನ್ನು ನ್ಯಾಯಾಲಯಕ್ಕೆ ಕರೆಯಲಾಗಿತ್ತು. ಆದರೆ ಅವರು ಹಾಜರಾಗದ ಕಾರಣ ನ್ಯಾಯಾಧೀಶರು ಬಂಧನ ವಾರಂಟ್ ಹೊರಡಿಸಿದ್ದಾರೆ.
ಮುಂಬೈನ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಸೋನು ಸೂದ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 10 ರಂದು ನಡೆಯಲಿದೆ.