ನವದೆಹಲಿ: ಪಂಜಾಬ್ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಕಾಲಿದಳ ನಾಯಕರು ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.
ಅಕಾಲಿದಳ ಹಾಗೂ ಇತರೆ ಪಕ್ಷಗಳ ವಿರುದ್ಧ ಟೀಕೆ ಮಾಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಮತ್ತು ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕ ಆರೋಪಗಳನ್ನು ಮಾಡಿದ್ದಕ್ಕಾಗಿ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲು ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಸೂಚಿಸಿದ್ದಾರೆ.
ಶಿರೋಮಣಿ ಅಕಾಲಿದಳ (ಎಸ್‌ಎಡಿ) ದೂರಿನ ಮೇರೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪಂಜಾಬ್‌ನ ರಾಜ್ಯ ಚುನಾವಣಾ ಆಯೋಗ ಮೊಹಾಲಿ ಆಡಳಿತಕ್ಕೆ ಸೂಚಿಸಿದ್ದು, ಅದರ ಅನ್ವಯ ಕ್ರಮ ಕೈಗೊಳ್ಳಲಾಗಿದೆ.