alex Certify ಹೈವೋಲ್ಟೇಜ್ ಪಂಜಾಬ್ ಚುನಾವಣೆಗೆ ಇಂದು ಒಂದೇ ಹಂತದ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈವೋಲ್ಟೇಜ್ ಪಂಜಾಬ್ ಚುನಾವಣೆಗೆ ಇಂದು ಒಂದೇ ಹಂತದ ಮತದಾನ

ನವದೆಹಲಿ: ದೇಶದ ಗಮನ ಸೆಳೆದ ಪಂಜಾಬ್ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

117 ಸದಸ್ಯಬಲದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 1304 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್, ಅಕಾಲಿದಳ, ಆಮ್ ಆದ್ಮಿ ಪಾರ್ಟಿ ನಡುವೆ ತೀವ್ರ ಪೈಪೋಟಿ ಇದೆ. ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಪಕ್ಷದ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಪರ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಪರ ಅರವಿಂದ್ ಕೇಜ್ರಿವಾಲ್ ಹಾಗೂ ಬಿಜೆಪಿ ಪರವಾಗಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕಾಂಗ್ರೆಸ್ ಗೆ ಆಮ್ ಆದ್ಮಿ ಪಾರ್ಟಿ ಪ್ರಬಲ ಎದುರಾಳಿಯಾಗಿದ್ದು, ಅಕಾಲಿದಳ, ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...