ಚಂಡೀಗಢ: ದೆಹಲಿ ಟ್ಯಾಕ್ಟರ್ ರ್ಯಾಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರಿಗೆ 2 ಲಕ್ಷ ರೂ. ನೆರವು ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಸಿಂಗ್ ಚನ್ನಿ ಘೋಷಣೆ ಮಾಡಿದ್ದಾರೆ.
2021 ರ ಜನವರಿ 26 ರಂದು ದೆಹಲಿಯಲ್ಲಿ ರೈತರು ಕೈಗೊಂಡಿದ್ದ ಟ್ರ್ಯಾಕ್ಟರ್ ರ್ಯಾಲಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಅವರಿಗೆ 2 ಲಕ್ಷ ರೂ. ನೆರವು ನೀಡಲಾಗುತ್ತದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ಹೋರಾಟ ಕೈಗೊಂಡಿದ್ದು, ಹೋರಾಟದ ಅಂಗವಾಗಿ ಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಹಲವು ರೈತರನ್ನು ಬಂಧಿಸಲಾಗಿತ್ತು.
ಬಂಧನಕ್ಕೆ ಒಳಗಾದ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ತಿಳಿಸಿದ್ದಾರೆ.