alex Certify ರೈತರಿಗೆ ತಲಾ 2 ಲಕ್ಷ ರೂ. ನೆರವು ನೀಡಲು ನಿರ್ಧಾರ: ಪಂಜಾಬ್ ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ತಲಾ 2 ಲಕ್ಷ ರೂ. ನೆರವು ನೀಡಲು ನಿರ್ಧಾರ: ಪಂಜಾಬ್ ಸಿಎಂ ಘೋಷಣೆ

ಚಂಡೀಗಢ: ದೆಹಲಿ ಟ್ಯಾಕ್ಟರ್ ರ್ಯಾಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರಿಗೆ 2 ಲಕ್ಷ ರೂ. ನೆರವು ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಸಿಂಗ್ ಚನ್ನಿ ಘೋಷಣೆ ಮಾಡಿದ್ದಾರೆ.

2021 ರ ಜನವರಿ 26 ರಂದು ದೆಹಲಿಯಲ್ಲಿ ರೈತರು ಕೈಗೊಂಡಿದ್ದ ಟ್ರ್ಯಾಕ್ಟರ್ ರ್ಯಾಲಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಅವರಿಗೆ 2 ಲಕ್ಷ ರೂ. ನೆರವು ನೀಡಲಾಗುತ್ತದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ಹೋರಾಟ ಕೈಗೊಂಡಿದ್ದು, ಹೋರಾಟದ ಅಂಗವಾಗಿ ಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಹಲವು ರೈತರನ್ನು ಬಂಧಿಸಲಾಗಿತ್ತು.

ಬಂಧನಕ್ಕೆ ಒಳಗಾದ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...