ಚಂಡೀಗಢ: ಸಿ ಮತ್ತು ಡಿ ವೃಂದಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಹಂತಹಂತವಾಗಿ ಕಾಯಂಗೊಳಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೇಳಿದ್ದಾರೆ.
ಪಂಜಾಬ್ ನ 35000 ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರ ನಿರ್ಧರಿಸಿದೆ. ಹಂತಹಂತವಾಗಿ ಸಿ ಮತ್ತು ಡಿ ವೃಂದಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು. ಮುಂದಿನ ಅಧಿವೇಶನದಲ್ಲಿ ವಿಧೇಯಕದ ಕರಡು ಸಿದ್ಧಪಡಿಸುವಂತೆ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ ಎಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯ 10,000 ಖಾಲಿ ಹುದ್ದೆಗಳು ಸೇರಿದಂತೆ 25 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಭಗವಂತ ಮಾನ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.