alex Certify ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದ ನಟಿ ಈಗ ಬಿಜೆಪಿ ಸೇರ್ಪಡೆಗೆ ರೆಡಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದ ನಟಿ ಈಗ ಬಿಜೆಪಿ ಸೇರ್ಪಡೆಗೆ ರೆಡಿ…!

ಪಂಜಾಬ್​ ವಿಧಾನಸಭಾ ಚುನಾವಣೆಯಲ್ಲಿ ಕೆಲವು ಸ್ಟಾರ್​ ಪವರ್​ಗಳನ್ನು ಬಳಕೆ ಮಾಡಿಕೊಳ್ಳಲು ನಿರ್ಧರಿಸಿರುವ ಬಿಜೆಪಿಯು ಇಂದು ತನ್ನ ಪಕ್ಷಕ್ಕೆ ನಟಿ ಮಹಿ ಗಿಲ್​​ರನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಚಂಡೀಘಡದಲ್ಲಿ ಇಂದು ಮಹಿ ಗಿಲ್​ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.

ನಟಿ ಮಹಿ ಗಿಲ್​ ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ವಾರ್ಡ್ ಸಂಖ್ಯೆ 2ರಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಹರ್ಮೋಹಿಂದರ್​ ಸಿಂಗ್​ ಲಕ್ಕಿ ಅವರ ಪರ ಪ್ರಚಾರ ಮಾಡಿದ್ದರು. ಆಗ ಲಕ್ಕಿ ಮಹಿ ಗಿಲ್​ ತನ್ನ ಬಾಲ್ಯದ ಗೆಳತಿ ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ಮಹಿ ಗಿಲ್​​ ನನಗೆ ರಾಜಕೀಯ ಸೇರುವ ಯಾವುದೇ ಉದ್ದೇಶವಿಲ್ಲ. ಭವಿಷ್ಯದಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇನೆ ಎಂದು ಹೇಳಿಕೊಂಡಿದ್ದರು.

ಇದಕ್ಕೂ ಮುನ್ನ, ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಹರ್ದೀಪ್​ ಸಿಂಗ್​ ಪುರಿ ಪಂಜಾಬ್​ನಲ್ಲಿ ಬಿಜೆಪಿ ಹಾಗೂ ಶಿರೋಮಣಿ ಅಕಾಲಿ ದಳದ ನಡುವಿನ ಚುನಾವಣೋತ್ತರ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿದ್ದರು. ಈ ಎರಡು ಪಕ್ಷದ ನಡುವಿನ ಮೈತ್ರಿಯು ಒಂದು ಕೆಟ್ಟ ದಾಂಪತ್ಯ ಎಂದು ಜರಿದಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...