alex Certify Shocking Video | ಹಾಡಹಗಲೇ ಕತ್ತಿಯಿಂದ ಕೊಚ್ಚಿ ಯುವತಿ ಹತ್ಯೆಗೈದ ಪಾಗಲ್ ಪ್ರೇಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video | ಹಾಡಹಗಲೇ ಕತ್ತಿಯಿಂದ ಕೊಚ್ಚಿ ಯುವತಿ ಹತ್ಯೆಗೈದ ಪಾಗಲ್ ಪ್ರೇಮಿ

Punjab Shocker: Jilted Lover Hacks Woman To Death With Sword In Broad Daylight In Mohali; Video Surfaces

ಪಂಜಾಬಿನ ಮೊಹಾಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನನ್ನು ಮದುವೆಯಾಗುವಂತೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ, ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಹಾಡಹಗಲೇ ಕತ್ತಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶನಿವಾರ ಈ ಘಟನೆ ನಡೆದಿದ್ದು, ಹತ್ಯೆಯಾದ ಯುವತಿಯನ್ನು ಬಲ್ಜಿಂದರ್ ಕೌರ್ ಎಂದು ಗುರುತಿಸಲಾಗಿದೆ. ಈಕೆ ತನ್ನ ಇತರೆ ನಾಲ್ವರು ಗೆಳತಿಯರ ಜೊತೆ ಕೆಲಸಕ್ಕೆ ತೆರಳುತ್ತಿದ್ದಾಗ ಮುಸುಕು ಹಾಕಿಕೊಂಡು ಮರದ ಹಿಂದೆ ಬಚ್ಚಿಟ್ಟುಕೊಂಡಿದ್ದ ಆರೋಪಿ ಏಕಾಏಕಿ ಕತ್ತಿಯಿಂದ ಹಲ್ಲೆ ಮಾಡಲು ಆರಂಭಿಸಿದ್ದಾನೆ.

ಇದರ ಪರಿಣಾಮ ಆಕೆ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದು, ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ನರಳುತ್ತಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾಳೆ.

ಈ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದ್ದು ಪ್ರಕರಣ ನಡೆದ ಕೆಲವು ಗಂಟೆಗಳ ಒಳಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯಾವ ಕಾರಣಕ್ಕಾಗಿ ಆತ ಈ ಕೃತ್ಯ ನಡೆಸಿದ್ದಾನೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...