ಬಾಡಿಗೆದಾರನ ಮೂರು ವರ್ಷದ ಮಗಳ ಮೇಲೆ 57 ವರ್ಷ ಪ್ರಾಯದ ಮನೆ ಮಾಲೀಕ ಅತ್ಯಾಚಾರ ಎಸಗಲು ಯತ್ನಿಸಿದ ಅಮಾನವೀಯ ಘಟನೆಯು ಲುಧಿಯಾನದ ಗುರು ನಾನಕ್ ನಗರದಲ್ಲಿ ನಡೆದಿದೆ.
ಮಗುವಿನ ಪೋಷಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಾರೆ. ಶನಿವಾರ ಕೆಲಸ ಮುಗಿಸಿ ಮನೆಗೆ ಬಂದ ವೇಳೆ ಮಗು ನೋವಿನಿಂದ ಅಳುತ್ತಿರೋದನ್ನು ಗಮನಿಸಿದ್ದಾರೆ. ಈ ಬಗ್ಗೆ ಮಗುವಿನ ಬಳಿ ಕೇಳಿದಾಗ ತನಗೆ ಆದ ಅನುಭವದ ಬಗ್ಗೆ ಪೋಷಕರೊಂದಿಗೆ ಹೇಳಿಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಪೋಷಕರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಾಗೂ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಮನೆ ಮಾಲೀಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಆದರೆ ಆರೋಪಿ ಪರಾರಿಯಾಗಿದ್ದಾನೆ. ನಗರವನ್ನೇ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376, 511 ಹಾಗೂ ಪೋಸ್ಕೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.