
ಪಂಚಾಬ್ ನ ಅಮೃತಸರ ಠಾಕೂರ್ ದ್ವಾರ ಮಂದಿರದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಪೊಲೀಸ್ ಗುಂಡೇಟಿಗೆ ಬಲಿಯಾಗಿದ್ದಾನೆ ಎನ್ನಲಾಗಿದೆ.
ಮಾರ್ಚ್ 15ರಂದು ಠಾಕೂರ್ ದ್ವಾರ ದೇಗುಲದ ಬಳಿ ಸ್ಫೋಟ ಪ್ರಕರಣದ ಶಂಕಿತ ಆರೋಪಿ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತೋರ್ವ ಶಂಕಿತ ತಪ್ಪಿಸಿಕೊಂಡಿದ್ದು, ಆತನಿಗಾಗಿ ಶೋಧಕಾರ್ಯ ಮುಂದುವರೆಸಲಾಗಿದೆ. ಮಾರ್ಚ್ 15ರಂದು ದೇಗುಲದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿತ್ತು. ವ್ಯಕ್ತಿಯೊಬ್ಬ ಸ್ಫೋಟಕ ಸಾಧನ ಎಸೆದಿದ್ದಾನೆ. ಅರಿಣಾಮ ದೇಗುಲದ ಗೋಡೆಯ ಒಂದುಭಾಗ ಹಾನಿಯಾಗಿದೆ. ಕಿಟಕಿ ಗಾಜುಗಳು ಪುಡಿಯಾಗಿವೆ. ಪೊಲೀಸರು ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಓರ್ವ ಸಾವನ್ನಪ್ಪಿದ್ದಾನೆ. ಇನ್ನೋರ್ವ ತಪ್ಪಿಸಿಕೊಂಡಿದ್ದಾನೆ ಎಂದಿದ್ದಾರೆ.