
ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನ್ಮದಿನವಾಗಿದ್ದು, ರಾಜ್ಯದ ಮೂಲೆ ಮೂಲೆಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ‘ಕಾಟೇರ’ ಚಿತ್ರದ ”ಪುಣ್ಯಾತ್ಮ” ವಿಡಿಯೋ ಹಾಡು ಬಿಡುಗಡೆಯಾಗಲಿದೆ. ವಿಜಯ್ ಪ್ರಕಾಶ್ ಧ್ವನಿಯಾಗಿರುವ ಈ ಹಾಡಿಗೆ ನಾಗಾರ್ಜುನ್ ಶರ್ಮ ಸಾಹಿತ್ಯ ಬರೆದಿದ್ದಾರೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದಾಗಿದೆ.
‘ಕಾಟೇರ’ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುವ ಮೂಲಕ ತನ್ನ ನಾಗಾ ಲೋಟ ಮುಂದುವರೆಸಿದೆ. ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜೋಡಿಯಾಗಿ ಆರಾಧನಾ ಅಭಿನಯಿಸಿದ್ದು, ಶೃತಿ, ಜಗಪತಿ ಬಾಬು, ಮಾಸ್ಟರ್ ರೋಹಿತ್, ಕುಮಾರ್ ಗೋವಿಂದ್, ವಿನೋದ್ ಕುಮಾರ್ ಅಲ್ವಾ, ವೈಜನಾಥ್ ಬಿರಾದರ್, ಪದ್ಮಾವಾಸಂತಿ, ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ.