
ಕಲಬುರಗಿ: ಧರಣಿ ನಡೆಸುತ್ತಿದ್ದ ವ್ಯಕ್ತಿಯೋರ್ವ ಪುರಸಭೆಗೆ ನುಗ್ಗಿ ಹಿರಿಯ ಆರೋಗ್ಯಾಧಿಕಾರಿ ಮೇಲೆ ಹಲ್ಲೆ ನಡೆರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ.
ರೈತಪರ ಹೋರಾಟಗಾರ ಮಹೇಶ್ ರಾಥೋಡ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ರಾಜಶೇಖರಯ್ಯ ಮೇಲೆ ಹಲ್ಲೆ ನಡೆಸಿದ್ದಾನೆ.
ಮಹೇಶ್ ರಾಥೋಡ್, ಏಕಾಏಕಿ ಪುರಸಭೆಗೆ ನುಗ್ಗಿ, ರಾಜಶೇಖರಯ್ಯ ಅವರನ್ನು ಹೊರಗೆ ಎಳೆದು ತಂದು ಹಲ್ಲೆ ನಡೆಸಿದ್ದಾನೆ. ಕೆಲ ಪೌರ ಕರಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಕಳೆದ 8 ದಿನಗಳಿಂದ ಪ್ರತಿಭಟನೆ ನಡೆಸಿದರೂ ಪುರಸಭೆ ಅಧಿಕಾರಿಗಳು ಸ್ಪಂದಿಸುತ್ತಿರಲಿಲ್ಲ. ಇದರಿಂದ ತಾಳ್ಮೆ ಕಳೆದುಕೊಂಡ ಮಹೇಶ್ ರಾಠೋಡ್ ಪುರಸಭೆಗೆ ನುಗ್ಗಿ ಅಧಿಕಾರಿ ಮೇಲೆ ಹಲ್ಲ್ಎ ನಡೆಸಿದ್ದಾರೆ.
ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.