ಬಳ್ಳಾರಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ನಡವಿ ಗ್ರಾಮದ ನಾಲ್ಕು ಜನ ಮತ್ತು ಮೈಲಾಪುರ ಗ್ರಾಮದ ಐದು ಜನ ಭೂಮಾಲೀಕರು ತಮ್ಮ ಜಮೀನುಗಳನ್ನು ನಿಗಮಕ್ಕೆ ಮಾರಾಟ ಮಾಡಲು ಒಪ್ಪಿಗೆ ಸಲ್ಲಿಸಿರುತ್ತಾರೆ. ಜಮೀನುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಏನಾದರೂ ಅಕ್ಷೇಪಣೆಗಳಿದ್ದಲ್ಲಿ ಜುಲೈ 21 ರೊಳಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಲಿಖಿತವಾಗಿ ಅಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.