alex Certify BIG NEWS: ಇಂದಿನಿಂದ ಭಕ್ತರಿಗೆ ಪುರಿ ಜಗನ್ನಾಥನ ದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ಭಕ್ತರಿಗೆ ಪುರಿ ಜಗನ್ನಾಥನ ದರ್ಶನ

ಪುರಿ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹಂತಹಂತವಾಗಿ ಸಾರ್ವಜನಿಕರಿಗೆ ಪೂರಿ ಜಗನ್ನಾಥನ ದರ್ಶನ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.

ಒಡಿಶಾದಲ್ಲಿ ಪ್ರಸ್ತುತ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಆಗಸ್ಟ್ 23ರಿಂದ ಸ್ಥಳೀಯ ಸಾರ್ವಜನಿಕರಿಗೆ ಪುರಿ ಜಗನ್ನಾಥನ ದರ್ಶನಕ್ಕೆ ಅವಕಾಶವನ್ನು ನೀಡಲಾಗಿದೆ.

ಆಗಸ್ಟ್ 12ರಿಂದ ಮೊದಲ ಹಂತದಲ್ಲಿ ದೇವರ ದರ್ಶನಕ್ಕೆ ಆಡಳಿತ ಮಂಡಳಿ ಅವಕಾಶ ಮಾಡಿಕೊಟ್ಟಿತ್ತು. ದೇವಸ್ಥಾನದ ಸಿಬ್ಬಂದಿ ಮತ್ತು ಸುತ್ತಲಿನ ಸ್ಥಳೀಯರಿಗೆ ಮಾತ್ರವೇ ಅವಕಾಶ ನೀಡಲಾಗಿತ್ತು.

ಆಗಸ್ಟ್ 16 ರಿಂದ 20 ರವರೆಗೆ ಬೆಳಗ್ಗೆ 7ರಿಂದ ರಾತ್ರಿ 7 ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಒದಗಿಸಲಾಗಿತ್ತಿದೆ. ಈ ಸಂಬಂಧ ಆಗಸ್ಟ್ 4ರಂದು ಆಡಳಿತ ಮಂಡಳಿಯ ಮಹತ್ವದ ಸಭೆ ನಡೆದಿದ್ದು, ಸಾರ್ವಜನಿಕರಿಂದ ದರ್ಶನಕ್ಕೆ ಒತ್ತಾಯ ಹೆಚ್ಚಾದ ಹಿನ್ನೆಲೆಯಲ್ಲಿ ಮಂದಿರದಲ್ಲಿ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ಕೊರೊನಾ ಎರಡನೇ ಅಲೆಯ ದಾಳಿಯ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ 24ರಿಂದ ದೇವಸ್ಥಾನವನ್ನು ಬಂದ್ ಮಾಡಲಾಗಿತ್ತು. ಆದರೆ ನಿತ್ಯ ಪೂಜೆ ಮಾತ್ರ ನಡೆಸಲಾಗುತ್ತಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...